TSK

TSK · ಯೆಶಾಯ 33:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.

¶ ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

¶ ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.

ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.

ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.

‹ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.›

ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.

ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.