TSK

TSK · ಯೆಶಾಯ 34:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.

ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.

ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.

ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.

ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನ ರಕ್ತದಿಂದ ತುಂಬುವವು.

ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.

¶ “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.

“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.