TSK

TSK · ಯೆಶಾಯ 34:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.

ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.

ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”

“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.

ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?

ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.

¶ ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,