ಆದಿಕಾಂಡ 19:28
TSK
ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
TSK
Treasury of Scripture Knowledge references in ಕನ್ನಡ IRV.
ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.
‹ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.›
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.