ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.
TSK
TSK · ಯೆಶಾಯ 35:10
Treasury of Scripture Knowledge references in ಕನ್ನಡ IRV.
ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.
ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
¶ ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.
¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.