TSK

TSK · ಯೆಶಾಯ 35:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,

ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.

ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

¶ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›

ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.

ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.

ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.

ಯೇಸು ಅವನಿಗೆ, ‹“ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ”› ಎಂದು ಹೇಳಿದನು.

ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.

ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.