TSK

TSK · ಯೆಶಾಯ 36:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.

ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.

ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.

ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

¶ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”