¶ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
TSK
TSK · ಯೆಶಾಯ 37:12
Treasury of Scripture Knowledge references in ಕನ್ನಡ IRV.
¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
¶ ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;