ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.
TSK
TSK · ಯೆಶಾಯ 37:17
Treasury of Scripture Knowledge references in ಕನ್ನಡ IRV.
ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.
ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.
ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.
ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”