2 ಅರಸುಗಳು 19:31
TSK
ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
TSK
Treasury of Scripture Knowledge references in ಕನ್ನಡ IRV.
ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.
¶ ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.