ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
TSK
TSK · ಯೆಶಾಯ 38:1
Treasury of Scripture Knowledge references in ಕನ್ನಡ IRV.
¶ ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
¶ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
¶ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
¶ ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.
ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
¶ ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.