TSK

TSK · ಯೆಶಾಯ 38:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.

ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.

ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.

ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.

ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.

ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.

¶ ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.