TSK

TSK · ಯೆಶಾಯ 38:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.

ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.

ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.

ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ

ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.

ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.