ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
TSK
TSK · ಯೆಶಾಯ 38:20
Treasury of Scripture Knowledge references in ಕನ್ನಡ IRV.
ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.