TSK

TSK · ಯೆಶಾಯ 39:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.

ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.

ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.

ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.

¶ ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.