TSK

TSK · ಯೆಶಾಯ 40:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ,

ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.

ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.

ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.

ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.

ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.

ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.

ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.