TSK

TSK · ಯೆಶಾಯ 41:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.

ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

‹ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.›