TSK

TSK · ಯೆಶಾಯ 42:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.

ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.

ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ.

ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.

ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.

ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”

ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!

ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.

¶ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.

¶ ‹“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.›