TSK

TSK · ಯೆಶಾಯ 42:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,

ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.

ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.

“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.

ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.

ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.

ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.

¶ ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.