ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
TSK
TSK · ಯೆಶಾಯ 43:19
Treasury of Scripture Knowledge references in ಕನ್ನಡ IRV.
ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.
ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.
ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.