TSK

TSK · ಯೆಶಾಯ 44:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.

¶ ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,

‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.

ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.

¶ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.