¶ ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
TSK
TSK · ಯೆಶಾಯ 44:27
Treasury of Scripture Knowledge references in ಕನ್ನಡ IRV.
ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
¶ ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.