¶ ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
TSK
TSK · ಯೆಶಾಯ 45:14
Treasury of Scripture Knowledge references in ಕನ್ನಡ IRV.
ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
¶ ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.
ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.
ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
¶ “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ