ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
TSK
TSK · ಯೆಶಾಯ 45:20
Treasury of Scripture Knowledge references in ಕನ್ನಡ IRV.
ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.
¶ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
¶ ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”
ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.
ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
¶ ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.
ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.