TSK

TSK · ಯೆಶಾಯ 46:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.

ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.

ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.

ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.

‹ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.›

¶ ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.

“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.