ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು.
TSK
TSK · ಯೆಶಾಯ 47:11
Treasury of Scripture Knowledge references in ಕನ್ನಡ IRV.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
¶ “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’
‹ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.›
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
¶ “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.