¶ ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
TSK
TSK · ಯೆಶಾಯ 47:8
Treasury of Scripture Knowledge references in ಕನ್ನಡ IRV.
ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.
‹ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.›
ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.