TSK

TSK · ಯೆಶಾಯ 49:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.

ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.

ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.

ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.

ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”

ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,

ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.

ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.

“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.