ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
TSK
TSK · ಯೆಶಾಯ 49:22
Treasury of Scripture Knowledge references in ಕನ್ನಡ IRV.
ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
¶ ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
‹ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.›