¶ “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
TSK
TSK · ಯೆಶಾಯ 49:6
Treasury of Scripture Knowledge references in ಕನ್ನಡ IRV.
ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.