TSK

TSK · ಯೆಶಾಯ 49:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.

ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.

ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.

ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.

ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.

ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.

ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.

‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›

¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.

‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.

¶ ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.