¶ ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.
TSK
TSK · ಯೆಶಾಯ 5:18
Treasury of Scripture Knowledge references in ಕನ್ನಡ IRV.
¶ ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.
ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
¶ “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›