ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
TSK
TSK · ಯೆಶಾಯ 5:2
Treasury of Scripture Knowledge references in ಕನ್ನಡ IRV.
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
¶ ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?
ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, ‹“ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ”› ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
¶ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, ‹“ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.›
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.