1 ಅರಸುಗಳು 20:16
TSK
ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
TSK
Treasury of Scripture Knowledge references in ಕನ್ನಡ IRV.
ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.