ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?
TSK
TSK · ಯೆಶಾಯ 5:29
Treasury of Scripture Knowledge references in ಕನ್ನಡ IRV.
ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.
ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.