ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
TSK
TSK · ಯೆಶಾಯ 52:14
Treasury of Scripture Knowledge references in ಕನ್ನಡ IRV.
ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.
ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
¶ ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.