TSK

TSK · ಯೆಶಾಯ 52:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.

ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.

ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.

ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.

ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.

“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.