TSK

TSK · ಯೆಶಾಯ 53:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.

ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.

ಅದಕ್ಕೆ ಯೇಸು ಅವರಿಗೆ, ‹“ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?›

ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.

ಆತನು ಅವನಿಗೆ, ‹“ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ”› ಎಂದು ಹೇಳಿದನು.

ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.

ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.

ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.