TSK

TSK · ಯೆಶಾಯ 54:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”

ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

“ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.”

“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,

ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.