TSK

TSK · ಯೆಶಾಯ 56:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.

¶ ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.

¶ ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.

¶ ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.

“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.

¶ ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಅದಕ್ಕಾತನು, ‹“ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ”› ಎಂದು ಉತ್ತರಕೊಟ್ಟನು.

ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.

¶ ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.

ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.

ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.

ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,

ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.

ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.