ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.
TSK
TSK · ಯೆಶಾಯ 57:1
Treasury of Scripture Knowledge references in ಕನ್ನಡ IRV.
ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.
ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.