TSK

TSK · ಯೆಶಾಯ 57:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.

ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.