TSK

TSK · ಯೆಶಾಯ 58:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.

¶ ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.

ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.

ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,

ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?

‹ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,›

¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.