TSK

TSK · ಯೆಶಾಯ 59:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.

ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.

ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.

ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.

ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.

ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!

ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.