TSK

TSK · ಯೆಶಾಯ 6:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.

ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.

ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.

ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ.

ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.

ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.

¶ ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,

ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.

ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.

ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.

ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

¶ ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

¶ ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.

ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,

¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.