¶ ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
TSK
TSK · ಯೆಶಾಯ 6:5
Treasury of Scripture Knowledge references in ಕನ್ನಡ IRV.
¶ ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.
ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.
¶ ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.
¶ ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
¶ “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.