TSK

TSK · ಯೆಶಾಯ 60:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.

ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.

ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.

ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.