TSK

TSK · ಯೆಶಾಯ 60:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.

ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.

ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”

ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.