ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
TSK
TSK · ಯೆಶಾಯ 60:19
Treasury of Scripture Knowledge references in ಕನ್ನಡ IRV.
ಕೀರ್ತನೆಗಳು 4:2
TSK
ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ
ಕೀರ್ತನೆಗಳು 62:7
TSK
ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
ಯೆಶಾಯ 24:23
TSK
ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
ಜೆಕರ್ಯ 2:9
TSK
“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
ಪ್ರಕಟನೆ 21:23
TSK
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.