TSK

TSK · ಯೆಶಾಯ 61:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.

ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.

ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.

ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.

“ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.

¶ ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,

ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

¶ ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.

ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.

ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.